ಮಂಗಳೂರು: ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಕಡಬ ತಾಲೂಕಿನ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.19ರ ಶುಕ್ರವಾರ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮುಲ್ಕಿ ತಾಲೂಕಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.