ಬೆಳ್ತಂಗಡಿ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಜು.19ರ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬವರೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಶ್ರೀ ರಾಮಾಂಜನೇಯ ಭಜನಾ ಮಂದಿರದ ಬಳಿಯ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.
ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ
ಪೂಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ
