ಬೆಳ್ತಂಗಡಿ; ಗುರುವಾಯನ ಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ವಿದ್ಯುತ್ ಕಂಬ ರಸ್ತೆಗೆ ಬಿದ್ದು ಕೆಲ ಸಮಯ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ.
ಗುರುವಾಯನಕೆರೆ ವರಕಬೆ ಸಮೀಪ ಭಾರೀ ಮಳೆಗೆ ಮರವೊಂದು ವಿದ್ಯುತ್ ಕಂಬದ ಮೇಲೆ ಮುರಿದು ಬಿದ್ದಿದೆ ವಿದ್ಯುತ್ ಕಂಬ ರಸ್ತೆಗೆ ಬಿದ್ದಿದೆ. ಈ ಸಂದರ್ಭದಲ್ಲಿ ವಿದ್ಯುತ್ ಲೈನ್ ಲಾರಿಯೊಂದರ ಮೇಲೆ ಬಿದ್ದಿದೆ ಆದರೆ ಈ ವೇಳೆಗೆ ವಿದ್ಯುತ್ ಸ್ಥಗಿತಗೊಂಡಿದ್ದ ಕಾರಣ ದೊಡ್ಡ ಅನಾಹುತ ತಪ್ಪಿತ್ತು. ಇಲಾಖಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ಮರ ಹಾಗೂ ವಿದ್ಯುತ್ ಕಂಬವನ್ನು ರಸ್ತೆಯಿಙದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿದರು