ಬೆಳ್ತಂಗಡಿ; ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು.
ತಾಲೂಕಿನ ದಿಡುಪೆ ಪ್ರದೇಶಕ್ಕೆ ಭೇಟಿ ನೀಡಿದ ಅವರು ಅಲ್ಲಿ ಮಳೆ ಹಾಗೂ ಭೂಕುಸಿತದಿಂದಾಗಿ ಸಂಭವಿಸಿರುವ ಅನಾಹುತಗಳನ್ನು ವೀಕ್ಷಿಸಿದರು.
ನೆರಿಯ ಗ್ರಾಮದಲ್ಲಿ ಭಾರೀ ಗಾಳಿ ಮಳೆಗೆ ದೊಡ್ಡ ಪ್ರಮಾಣದಲ್ಲಿ ಹಾನಿಗಳಾಗಿದ್ದು ಈ ಪ್ರದೇಶಗಳಿಗೆ ಭೇಟಿ ನೀಡಿದರು. ಮನೆಗಳಿಗೆ ಆಗಿರುವ ಹಾನಿಯನ್ನು ಪರಿಶೀಲಿಸಿದ ಅವರು ಕೃಷಿ ಹಾನಿಯ ಬಗ್ಗೆಯೂ ಮಾಹಿತಿ ಪಡೆದುಕೊಂಡರು. ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಅವರೊಂದಿಗೆ ಮಾತುಕತೆ ನಡೆಸಿ ಮಳೆಯಿಂದಾಗಿ ಹಾನಿಗೀಡಾಗಿರುವವರಿಗೆ ಪರಿಹಾರ ವೊದಗಿಸುವ ಕುರಿತು ಮಾತುಕತೆ ನಡೆಸಿದರು.ಅವರೊಂದಿಗೆ ಪಕ್ಷದ ಮುಖಂಡರುಗಳು ಇದ್ದರು.