ಬೆಳ್ತಂಗಡಿ; ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತಗೊಂಡಿದೆ. ಕಿತು ಸೇತುವೆ ಭಾಗಶ ಕುಸಿದು ಬಿದ್ದಿದ್ದು ಜನರ ಸಂಚಾರ ಅಸಾಧ್ಯವಾಗಿದೆ.
ಇದರಿಂದ ಸುಮಾರು 50 ಮನೆಗಳಿಗೆ ಸಂಪರ್ಕಕ್ಕೆ ತೊಂದರೆ ಆಗಿದ್ದು ಹೊರ ಪ್ರದೇಶದಿಂದ ಸಂಪರ್ಕ ಕಳೆದುಕೊಂಡಿದೆ.
ಪುತ್ತೂರು ಸಹಾಯಕ ಕಮಿಷನರ್,
ಬೆಳ್ತಂಗಡಿ ತಹಶಿಲ್ದಾರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹನ ಅಧಿಕಾರಿ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು..
ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ
ಘಟನ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಬಗ್ಗೆ ಶೀಘ್ರವಾಗಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.