ಬೆಳ್ತಂಗಡಿ; ಸವಣಾಲಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆ ಮೇಲೆ ಬಿದ್ದ ಘಟನೆ ಸಂಭವಿಸಿದ್ದು ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಸವಣಾಲಿನ ರಘುರಾಮ್ ಅವರ ಮನೆಯ ಮೇಲೆ ಕಾರು ಬಿದ್ದಿದೆ. ಸವಣಾಲು ರಸ್ತೆಯಲ್ಲಿ ಸಾಗುತ್ತಿದ್ದ ಕಾರು 20 ಅಡಿ ಆಳದಲ್ಲಿ ಇದ್ದ ಮನೆ ಮೇಲೆ ಬಿದ್ದಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು ಘಟನೆಯಲ್ಲಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮನೆಯ ಗೋಡೆಗೆ ಹಾನಿಯಾಗಿದ್ದು ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಅತಿ ವೇಗವೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ಗಾಯಾಳು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ