ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಳೆ ಹಾನಿ
ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮದ್ದಡ್ಕ, ಗುರುವಾಯನಕೆರೆ ಹಿ.ಪ್ರಾ ಶಾಲೆ, ಬಂಟರ ಭವನ, ಗುರುವಾಯನಕೆರೆ ಮಸೀದಿ, ಮೇಲಂತಬೆಟ್ಟು, ಅಳದಂಗಡಿ, ಸವಣಾಲು, ಮೊದಲಾದ ಕಡೆಗಳಿಗೆ ಭೇಟಿ ನೀಡಿ, ಮನೆ ಹಾನಿ, ಗುಡ್ಡ ಕುಸಿತ ಮೊದಲಾದ ಮಳೆ ಹಾನಿ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷೀತ್ ಶಿವರಾಂ, ಕಂದಾಯ ಇಲಾಖೆ ಸೇರಿದಂತೆ ವಜವಿಧ ಇಲಾಖೆಗಳ ಅಧಿಕಾರಿಗಳು, ಉಪಸ್ಥಿತರಿದ್ದರು.