Home ಸ್ಥಳೀಯ ಸಮಾಚಾರ ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ಪರಿಶೀಲನೆ

871
0

ಬೆಳ್ತಂಗಡಿ: ತಾಲೂಕಿನಲ್ಲಿ ಮಳೆಯಿಂದ ಅಪಾರ ಹಾನಿಯಾಗಿದ್ದು ಹಾನಿಯಾದ ಪ್ರದೇಶಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆ.ಪಿ.ಸಿ.ಸಿ ಸದಸ್ಯ ರಕ್ಷಿತ್ ಶಿವರಾಂ ಅವರು ಸಚಿವರೊಂದಿಗೆ ಇದ್ದು ಮಳೆಯಿಂದಾಗಿ ಆಗಿರುವ ಹಾನಿಯ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.
ಬೆಳ್ತಂಗಡಿ ತಾಲೂಕಿನ ಮದಡ್ಕ – ಪಡಂಗಡಿ ಸಂಪರ್ಕ ರಸ್ತೆ ಹಾಗೂ ಸೇತುವೆ ಕುಸಿತವಾದ ಪ್ರದೇಶವನ್ನು ಪರಿಶೀಲನೆ ನಡೆಸಿ ಊರವರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಲಾಯಿಲ ಗ್ರಾಮದ ಗುರಿಂಗಾನ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಊರಿನವರಿಂದ ತಿಳಿದುಕೊಂಡರು. ಇಲಾಖೆಯ ಅಧಿಕಾರಿಗಳಿಂದ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡರು.


ಮಳೆ ಬರುತ್ತಿರುವ ಕಾರಣ ಈಗ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಮಳೆ ಕಡಿಮೆಯಾದ ಬಳಿಕ ಇಲಾಖೆಯಿಂದ ವರದಿ ತರಿಸಿಕೊಂಡು ಅಗತ್ಯ ಕೆಲಸ ಕಾರ್ಯಗಳನ್ನು ನಡೆಸಲಾಗುವುದು ಹಾಗೂ ಹಾನಿಯಾಗಿರುವ ಮನೆಗಳಿಗೆ ಪರಿಹಾರವನ್ನು ನೀಡುವ ಕ್ರಮ ಗೊಳ್ಳಲಾಗುವುದು ಎಂದು ಮಾಧ್ಯಮಗಳಿಗೆ ಸಚಿವರು ಮಾಹಿತಿ ನೀಡಿದರು.
ಸಚಿವರೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಪುತ್ತೂರು ಎ.ಸಿ ಜುಬಿನ್ ಮೋಹಪಾತ್ರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಎಇಇ ನಿತಿನ್, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ , ಬೆಳ್ತಂಗಡಿ ಇನ್ಸೆಕ್ಟ‌ರ್ ಸುಬ್ಬಾಪೂರ್ ಮಠ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್.ಕೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಮತ್ತಿತರ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here