Home ಅಪರಾಧ ಲೋಕ ಕೊಕ್ರಾಡಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಕೊಕ್ರಾಡಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

1101
0

ಬೆಳ್ತಂಗಡಿ: ತಾಲೂಕಿನ ಕೊಕ್ರಾಡಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಆರೋಪಿಗೆ ಮಂಗಳೂರಿನ ನ್ಯಾಯಾಲಯ 20 ವರ್ಷಗಳ ಕಠಿನ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ನಿವಾಸಿ ಯೋಗೀಶ (26) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿಕೊಂಡು ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ ಗರ್ಭಿಣಿಯಾದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವ ಕುಮಾರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸ್ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯಪರಿಗಣಿಸಿ ಹಾಗೂ ವಾದ ವಿವಾದ ಆಲಿಸಿದ ನ್ಯಾಯಾಲಯವು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ.

ಆ.2ರಂದು ನ್ಯಾಯಾಧೀಶರಾದ ಮಾನು ಕೆ.ಎಸ್.ಅವರು ಆರೋಪಿಗೆ ಭಾ.ದಂ.ಸಂ. ಕಲಂ 376(2)(ಎನ್) ಮತ್ತು ಕಲಂ 6 ಪೊಕ್ಕೋ ಕಾಯಿದೆಯಂತೆ 20 ವರ್ಷಗಳ ಕಠಿನ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 357 (ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿಯಲ್ಲಿ ನೊಂದ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1,50,000 ರೂ. ಹಾಗೂ ನೊಂದ ಬಾಲಕಿಯ ಮಗುವಿಗೆ 3 ಲ.ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ವಾದಿಸಿದ್ದರು.

LEAVE A REPLY

Please enter your comment!
Please enter your name here