ಬಂದಾರು; ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ.
ಕೋಳಿ ಅಂಕ ನಡೆಯುತ್ತಿರುವ ಬಗ್ಗರ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಿಶೋರ್ ಪಿ. ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು, ಈ ವೇಳೆ ಕೋಳಿ ಅಂಕದಲ್ಲಿ ನಿರತರಾಗಿದ್ದ ದೇವಪ್ಪ ಉಮ್ಮನ ಗೌಡ, ಪರಮೇಶ್ವರ, ರಾಮಣ್ಣ ಬಾಲಕೃಷ್ಣ ಎಂಬ 5 ಮಂದಿಯನ್ನು ವಶಪಡಿಸಿಕೊಂಡಿದ್ದಾರೆ.
ಸದ್ರಿಯವರ ವಶದಿಂದ ಒಟ್ಟು ನಗದು ರೂ. 5410/- ರೂಪಾಯಿ, 3 ಹುಂಜ ಕೋಳಿಗಳು, 2 ಕೋಳಿ ಅಂಕಕ್ಕೆ ಬಳಸುವ ಕತ್ತಿಗಳನ್ನು ಹಾಗೂ ಸ್ಥಳದಲ್ಲಿದ್ದ 04 ದ್ವಿಚಕ್ರ ವಾಹನಗಳನ್ನು ಸ್ವಾಧೀನ ಪಡೆಸಿಕೊಂಡಿದ್ದು, ಪ್ರಕರಣದ ಬಗ್ಗೆ ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 58/2024 ៩០: 87 ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.