Home ಅಪರಾಧ ಲೋಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುತ್ತಿಗೆದಾರ ಕಂಪೆನಿಯ ಕಾರ್ಮಿಕ ಆತ್ಮಹತ್ಯೆಗೆ ಯತ್ನ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುತ್ತಿಗೆದಾರ ಕಂಪೆನಿಯ ಕಾರ್ಮಿಕ ಆತ್ಮಹತ್ಯೆಗೆ ಯತ್ನ

241
0

ಬೆಳ್ತಂಗಡಿ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಗುತ್ತಿಗೆ ದಾರ ಡಿ.ಪಿ. ಜೈನ್ ಕಂಪನಿಯ ಕಾರ್ಮಿಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ 06 ರ ಸಂಜೆ ನಡೆದಿದೆ. ಕಂಪನಿಯಲ್ಲಿ ಡ್ರೈವರ್ ಆಗಿ ಕರ್ತವ್ಯ ನಿರ್ವಹಿಸುತಿದ್ದ ನಾಗಪುರ ಮೂಲದ ಪ್ರಮೋದ್ ಜಾಡೆ (31) ಲಾರಿಯಲ್ಲಿ ಸೀಟ್ ಬೆಲ್ಟ್ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದು ತಕ್ಷಣ ಅಲ್ಲಿದ್ದ ಇತರರು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಕಳೆದ ಎರಡು ದಿನಗಳ ಹಿಂದೆ ಈತನ ತಂದೆ ಸಾವನ್ನಪ್ಪಿದ್ದು ಈ ಬೇಸರದಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನ ನಡೆದಿದೆ ಎಂಬ ಮಾಹಿತಿ ಇದೆ. ಅದರೆ ಕಳೆದ ಮೂರು ತಿಂಗಳಿನಿಂದ ಕಾರ್ಮಿಕರಿಗೆ ಸಂಬಳ ನೀಡದೇ ಇದುದ್ದರಿಂದ ಅ 05 ರ ಸೋಮವಾರ ಓಡಿಲ್ನಾಳ ಡಿ.ಪಿ. ಜೈನ್ ಪ್ಲಾಂಟೇಷನ್ ನಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ಈ ಎಲ್ಲ ಕಾರಣಗಳಿಂದ ಆತ್ಮಹತ್ಯೆ ಯತ್ನ ಹಲವು ಅನುಮಾನಗಳಿಗೆ ಕಾರಣವಾಗಿದೆ. ತನಿಖೆಯಿಂದಷ್ಟೇ ಇನ್ನಷ್ಟು ಮಾಹಿತಿಗಳು ತಿಳಿದು ಬರಬೇಕಾಗಿದೆ.

LEAVE A REPLY

Please enter your comment!
Please enter your name here