ಬೆಳ್ತಂಗಡಿ; ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಅವರನ್ನು ನೇಮಕ ಮಾಡಲಾಗಿದೆ.
ಬೆಳ್ತಂಗಡಿ , ಪುತ್ತೂರು, ಸುಳ್ಯ, ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ನೇಮಕ ಮಾಡಲಾಗಿದೆ. ಶೇಖರ್ ಲಾಯಿಲ ರವರು ಕಳೆದ 26 ವರ್ಷಗಳಿಂದ ಎಡಪಂಥೀಯ ಕಾರ್ಮಿಕ ಸಂಘಟನೆಗಳಲ್ಲಿ ಬೀಡಿ ಕಾರ್ಮಿಕ ಸಂಘ , ಅಕ್ಷರ ದಾಸೋಹ ನೌಕರರ ಸಂಘ , ಅಂಗನವಾಡಿ ನೌಕರರ ಸಂಘಟನೆ , ಅಟೋ ರಿಕ್ಷಾ ಚಾಲಕ- ಮಾಲೀಕರ ಸಂಘಟನೆಗಳ ಪದಾಧಿಕಾರಿಯಾಗಿ , ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಡಿವೈಎಫ್ಐ) ನ ಜಿಲ್ಲಾ ಸಹ ಕಾರ್ಯದರ್ಶಿಯಾಗಿ , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ದ.ಕ ಜಿಲ್ಲಾ ಸಹ ಸಂಚಾಲಕರಾಗಿ , ತಾಲೂಕು ಸಂಚಾಲಕರಾಗಿ , ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷರಾಗಿ ಉತ್ಸಾಹಿ ಯುವಕ ಮಂಡಲದ ಅಧ್ಯಕ್ಷರಾಗಿ , ಕಾರ್ಯದರ್ಶಿಯಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ದುಡಿದಿದ್ದಾರೆ.