Home ಸ್ಥಳೀಯ ಸಮಾಚಾರ ಬೆಳ್ತಂಗಡಿ; ಕೆ.ಎಸ್.ಎಂ.ಸಿ.ಎ ಕೇಂದ್ರೀಯ ಸಮಿತಿ ಸಭೆ; ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಅಭಿನಂದನೆ

ಬೆಳ್ತಂಗಡಿ; ಕೆ.ಎಸ್.ಎಂ.ಸಿ.ಎ ಕೇಂದ್ರೀಯ ಸಮಿತಿ ಸಭೆ; ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಅಭಿನಂದನೆ

0

ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಸಂಘಟನೆಯಾಗಿರುವ ಕೆ.ಎಸ್.ಎಂ.ಸಿ.ಎ ಕೇಂದ್ರೀಯ ಸಮಿತಿಯ ಸಭೆ ಬೆಳ್ತಂಗಡಿಯ ಧರ್ಮಾಧ್ಯಕ್ಷರ ನಿವಾಸದಲ್ಲಿ ನಡೆಯಿತು.
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ ಲಾರೆನ್ಸ್ ಮುಕ್ಕುಯಿ ಅವರು ಕೆ.ಎಸ್.ಎಂ.ಸಿ ಎ ಕೇಂದ್ರೀಯ ಸಮಿತಿ ಸದಸ್ಯರುಗಳೊಂದಿಗೆ ಮಾತುಕತೆ ನಡೆಸಿ ವಿವಿಧ ವಿಚಾರಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಕೆ.ಎಸ್.ಎಂ ಸಿ ಎ ನಿರ್ದೇಶಕರಾದ ಫಾ. ಆದರ್ಶ್ ಪುದೀಯೇಡತ್ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು. ಕೆ.ಎಸ್.ಎಂ.ಸಿ ಎ ಅಧ್ಯಕ್ಷ ಬೆಟ್ಟಿ ನೆಡುನಿಲಂ ಹಾಗೂ ಕೇಂದ್ರೀಯ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘಟನೆಯ ವತಿಯಿಂದ ಅ.ವಂ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರನ್ನು ಅವರ ಫೀಸ್ಟ್ ಹಿನ್ನಲೆಯಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಕೆ.ಎಸ್.ಎಂ.ಸಿ.ಎ ಯ ಕೇಂದ್ರೀಯ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version