ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾಯಿಲ ಗ್ರಾಮದ ಕಾಶಿಬೆಟ್ಟು ಎಂಬಲ್ಲಿ ಶನಿವಾರ ಬೆಳಿಗ್ಗೆ ಲಾರಿಯೊಂದು ಹೊಂಡದಲ್ಲಿ ಸಿಲುಕಿಕೊಂಡು ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು ಜನ ರಸ್ತೆಯಲ್ಲಿ ಪರದಾಡುವಂತಾಗಿದೆ.
ಆ.10ರಂದು ಬೆಳಗ್ಗೆ ಸುಮಾರು 8:30 ರ ಹೊತ್ತಿಗೆ ಹೊಂಡಮಯವಾಗಿರುವ ಕಾಶಿಬೆಟ್ಟುವಿನ ಹೆದ್ದಾರಿಯಲ್ಲಿ ಲಾರಿ ಜಾಮ್ ಆಗಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಎರಡೂ ಬದಿಯಲ್ಲಿ ನೂರಾರು ವಾಹನಗಳು ಕಾದು ನಿಲ್ಲುವಂತಾಗಿದೆ. ಶಾಲಾ, ಕಾಲೇಜ್ ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳುವವರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಬಾರೀ ತೊಂದರೆ ಅನುಭವಿಸುತ್ತಿದ್ದಾರೆ. ಬಸ್ಸಿನಲ್ಲಿ ಕುಳಿತ ವಿದ್ಯಾರ್ಥಿಗಳು ಕ್ಲಾಸ್ ಮಿಸ್ ಮಾಡಿಕೊಳ್ಳುವ ಚಿಂತೆಯಲ್ಲಿದ್ದರೆ ಕೆಲಸಕ್ಕೆ ತೆರಳುವವರು ಹಾಜರಾತಿ ಕಳೆದುಕೊಳ್ಳುವ ಚಿಂತೆಯಲ್ಲಿದ್ದಾರೆ.
ಕಾಶಿಬೆಟ್ಟು ರಸ್ತೆ ಸಾರ್ವಜನಿಕರಿಗೆ ಬಾರೀ ತೊಂದರೆ ಉಂಟು ಮಾಡುತ್ತಿದೆ. ಪ್ರತಿ ದಿನ ಇಲ್ಲಿ ವಾಹನಗಳು ಸಿಲುಕಿಕೊಳ್ಳುವುದು ವಾಹನ ಸಂಚಾರ ಸ್ಥಗಿತಗೊಳ್ಳುತ್ತಿದೆ. ಇದು ಪ್ರತಿನಿತ್ಯದ ಸಮಸ್ಯೆಯಾಗಿದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಯಾರೊಬ್ಬರೂ ಈ ಬಗ್ಗೆ ಗಮನ ಹರಿಸುತ್ತಿಲ್ಲ. ತಾಲೂಕಿನ ಜನರ ಕಷ್ಟವನ್ನು ನೋಡುವವರು ಯಾರೂ ಇಲ್ಲವಾಗಿದ್ದಾರೆ,
ಕೊನೆಪಕ್ಷ ಈ ಸಮಸ್ಯೆಗೆ ತಾತ್ಕಾಲಿಕ ಪರಿಹಾರದವನ್ನಾದರೂ ನೀಡಲಿ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
