ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಎಸ್.ಸಿ ಘಟಕದ ಅಧ್ಯಕ್ಷರು ಮತ್ತು ಜಿಲ್ಲಾ ಉಪಾಧ್ಯಕ್ಷರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ .ಸಿ ಘಟಕದ ಅಧ್ಯಕ್ಷರಾದ ಶೇಖರ ಕುಕ್ಕೆಡಿ ಇವರು ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಮಾಡಿದ್ದಾರೆ.
ಬೆಳ್ತಂಗಡಿ ಗ್ರಾಮೀಣ ಎಸ್ ಸಿ ಘಟಕದ ಅಧ್ಯಕ್ಷರಾಗಿ ನೇಮಿರಾಜ್ ಕಿಲ್ಲೂರು ಮತ್ತು ನಗರ ಸಮಿತಿಯ ಅಧ್ಯಕ್ಷರನ್ನಾಗಿ ವಿಜಯ್ ಕುಮಾರ್ ಬಜಿರೆ.ಮತ್ತು ಜಿಲ್ಲಾ ಎಸ್.ಸಿ ಘಟಕದ ಉಪಾಧ್ಯಕ್ಷರಾಗಿ ಓಬಯ್ಯ ಆರಂಬೋಡಿ ಇವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.