ಬೆಳ್ತಂಗಡಿ; ಶಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಯಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿರುವುದು. ಮತ್ತು ಸಮಾಜದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸುತ್ತಾರೆ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ತಾಲೂಕು ಆಡಳಿತದಿಂದ ಆಡಳಿತ ಸೌಧದ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸದರಿ ಕಾರ್ಯಕ್ರಮದಲ್ಲಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಧ್ಯಕ್ಷ ನೆಲೆಯಲ್ಲಿ ಮಾತನಾಡುತ್ತಾ ಈ ದೇಶಕ್ಕೆ ಕೇವಲ ಶಾಂತಿಯಿಂದ ಕೇವಲ ಚರಕ ತಿರುಗಿಸಿದರಿಂದ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿಲ್ಲ. ಸರ್ಕಾರಿ ಅಧಿಕೃತ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿರುವುದು. ಮತ್ತು ಸಮಾಜದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸುತ್ತಾರೆ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಸಿಪಿಐಎಮ್ ಮುಖಂಡ ಬಿ.ಎಮ್ ಭಟ್ ದೂರು ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,ಅರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೆಬಾಸ್ಟಿಯನ್ ,ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ ,ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಅಮೀನ್ , ಹಾಗೂ ಪಕ್ಷದ ಪ್ರಮುಖರಾದ ಸದಾನಂದ ನಾಲ್ಕೂರು ಉಪಸ್ಥಿತರಿದ್ದರು.