ಬೆಳ್ತಂಗಡಿ; ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಚಾರ್ಮಾಡಿ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್, ನಗರ ಬೂತ್ ಕಾರ್ಯದರ್ಶಿ ಮಂಜುನಾಥ್ ಬೆಳ್ತಂಗಡಿ ಉಪಸ್ಥಿತರಿದ್ದರು.