ಬೆಳ್ತಂಗಡಿ : ನಿಟ್ಟಡೆ ಗ್ರಾಮದ ಬೂತೆರ್ ಎಂಬಲ್ಲಿನ ನಿವಾಸಿ ಸತೀಶ್ ಪೂಜಾರಿ (36) ಎಂಬವರು ಬುಧವಾರ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಟೆಸುತ್ತಿದ್ದಾರೆ.
ಮೃತರು ಅವಿವಾಹಿತರಾಗಿದ್ದು, ಮೇಸ್ತ್ರಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.