Home ರಾಜಕೀಯ ಸಮಾಚಾರ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸಚಿವರಿಗೆ ರಕ್ಷಿತ್ ಶಿವರಾಂ ಅವರಿಂದ ಮನವಿ

ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸಚಿವರಿಗೆ ರಕ್ಷಿತ್ ಶಿವರಾಂ ಅವರಿಂದ ಮನವಿ

0

ಬೆಳ್ತಂಗಡಿ; ಮಹಿಳಾ ಮತ್ತು ಮಕ್ಕಳ
ಅಭಿವೃದ್ಧಿ ,ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಕ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ
ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಅನುದಾನ‌ ಒದಗಿಸುವಂತೆ ಮಾಡಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಜಿರೆ ಗ್ರಾಮದ ಕಕ್ಕೆಜಾಲು,ಕಲ್ಮಂಜ ಗ್ರಾಮದ ನಿಡಿಗಲ್,ಬಂದಾರು ಗ್ರಾಮದ ಬುಳೇರಿ,ಸುಲ್ಕೇರಿ ಮತ್ತು ನಾರವಿ ಗ್ರಾಮದ ಅರಸಿಕಟ್ಟೆ ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಅನಿದಾನ ಒದಗಿಸುವಂತೆ ಮನವಿಯನ್ನು ಸಲ್ಲಿಸಿದರು.
ಮನವಿ ಸ್ವೀಕರಿಸಿದ ಸಚಿವರು ಮನವಿಗೆ ಪೂರಕವಾಗಿ ಸ್ಪಂದಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version