Home ಅಪರಾಧ ಲೋಕ ಬೆಳಾಲು ಕೊಲೆ ಪ್ರಕರಣ; ಕೊಲೆಗಾರ ಅಪ್ಪ ಮಗನಿಗೆ ನ್ಯಾಯಾಂಗ ಬಂಧನ

ಬೆಳಾಲು ಕೊಲೆ ಪ್ರಕರಣ; ಕೊಲೆಗಾರ ಅಪ್ಪ ಮಗನಿಗೆ ನ್ಯಾಯಾಂಗ ಬಂಧನ

514
0

ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌ ಆವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣವನ್ನು ಕೊನೆಗೂ ಪೊಲೀಸರು ಪತ್ತೆಹಚ್ಚಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದ್ದು,
ಮೃತ ಬಾಲಕೃಷ್ಣ ಭಟ್ ಅವರ ಮಗಳ ಗಂಡ ಹಾಗೂ ಮೊಮ್ಮಗ (ಮಗಳ ಮಗ) ಸೇರಿ‌ ಹತ್ಯೆ ಮಾಡಿರುವುದು ಪೊಲೀಸ್ ತನಿಖೆಯಲ್ಲಿ ಹೊರ ಬಂದಿದ್ದು ಕೇರಳ ಕಾಸರಗೋಡಿನ ನಿವಾಸಿಗಳಾಗಿರುವ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಜ್ಯೋತಿಷಿಯಾಗಿರುವ ರಾಘವೇಂದ್ರ ಕೆದಿಲಾಯ (53) ಹಾಗೂ ಅವರ ಮಗ ಮುರಳೀಕೃಷ್ಣ (20) ಎಂಬವರಾಗಿದ್ದಾರೆ.
ಧರ್ಮಸ್ಥಳ ಪೊಲೀಸರು ಸಿ.ಸಿ ಕ್ಯಾಮೆರಾಗಳು, ಮೊಬೈಲ್ ಲೊಕೇಶನ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ನಡೆಸಿದ ತನಿಖೆಯಲ್ಲಿ ಆರೋಪಿಗಳನ್ನು ಮೂರು ದಿನಗಳಲ್ಲಿ ಪತ್ತೆಹಚ್ಚಿ ಕಾನೂನಿನ ಮುಂದೆ ತಂದಿದ್ದಾರೆ. ಇದೀಗ ಇಬ್ಬರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಘಟನೆಯ ಹಿನ್ನಲೆ;
ಬೆಳಾಲಿನಲ್ಲಿ ಆ20ರಂದು ಮದ್ಯಾಹ್ನದ ಬಳಿಕ ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್ ಅವರನ್ನು ಅವರ ಮನೆಯ ಅಂಗಳದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪೊಲೋಸರು ನಾಲ್ಕು ವೀಶೇಷ ತಂಡಗಳನ್ನು ರಚಿಸಿ ತನಿಖೆಗೆ ಮುಂದಾಗಿದ್ದರು.
ಕೊಲೆ ನಡೆದ ರೀತಿ ಹಾಗೂ ಮನೆಯಲ್ಲಿ ಯಾವುದೇ ಕಳ್ಳತನ‌ ನಡೆಯದಿರುವುದನ್ನು ಗಮನಿಸಿದ ಪೊಲೀಸರು ಇದು ಪರಿಚಿತರಿಂದಲೇ ನಡೆದ ಕೃತ್ಯ ಎಂಬ ಅನುಮಾನಕ್ಕೆ ಬಂದಿದ್ದರು. ಅದಕ್ಕೆ ಪೂರಕವಾಗಿ ಊಟ ಮಾಡಿ ಎಸೆದಿದ್ದ ಎರಡು ಎಲೆಗಳು ಅಲ್ಲಿ ಕಂಡು ಬಂದಿದ್ದವು ಈ ಹಿನ್ನಲೆಯಲ್ಲಿ ಬಾಲಕೃಷ್ಣ ಭಟ್ ಅವರ ಸಂಬಂಧಿಕರನ್ನು ಕೇಂದ್ರೀಕರಿಸಿ ತನಿಖೆ ನಡೆಸಿದಾಗ ಕೊಲೆ ಪ್ರಕರಣದ ಹಿನ್ನಲೆ ಬಹಿರಂಗ ಗೊಂಡಿದೆ.

ಆಸ್ತಿ ಕೊಡದ ಕಾರಣಕ್ಕೆ ಕೊಲೆ;
ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಅವರ ಮೃತಪಟ್ಟ ಪತ್ನಿಯ ಚಿನ್ನಾಭರಣಗಳನ್ನು ಮಗಳಾದ ವಿಜಯಲಕ್ಷ್ಮಿ ಅವರಿಗೆ ನೀಡದೆ ಲಾಕರ್ ನಲ್ಲಿ ಇರಿಸಿದ್ದರು. ಜಾಗದಲ್ಲಿಯೂ ಪಾಲು ನೀಡಿರಲಿಲ್ಲ ಎನ್ನಲಾಗಿದೆ ತಾನು ಬದುಕಿರುವ ವರೆಗೂ ಜಾಗ ಪಾಲು ಮಾಡುವುದಿಲ್ಲ ಎಂದು ಹೇಳುತ್ತಿದ್ದರು ಎನ್ನಲಾಗಿದೆ ಇದೇ ಕಾರಣಕ್ಕಾಗಿ ಅಪ್ಪ ಮಗ ಸೇರಿ ಸಂಚು ರೂಪಿಸಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ.
ಕಾಸರಗೋಡಿನಿಂದ ಮಾರಕಾಸ್ತ್ರದೊಂದಿಗೆ ಸ್ಕೂಟರಿನಲ್ಲಿ ಬಂದ ಅಪ್ಪ ಮಗ ಬೆಳಾಲಿನ ಮನೆಗೆ ಬಂದು ಊಟ ಮಾಡಿದ್ದಾರೆ, ಊಟದ ಬಳಿಕ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರ ಮೇಲೆ ಮನೆಯೊಳಗೆಯೇ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ, ಹಲ್ಲೆ ವೇಳೆ ಮನೆಯಿಂದ ಹೊರಗೆ ಓಡಿದ ಅವರನ್ನು ಬೆನ್ನಟ್ಟಿದ ಆರೋಪಿಗಳು ಅಂಗಳದಲ್ಲಿ ಕುಸಿದು ಬಿದ್ದಿದ್ದಾರೆ ಅಲ್ಲಿ ಅವರ ಮೇಲೆ ಮತ್ತೆ ಮಾರಕಾಸ್ತ್ರಗಳಿಂದ ಆದಾಳಿ ನಡೆಸಿ ಕೊಲೆ ಮಾಡಲಾಗಿದೆ, ಬಳಕ ಆರೋಪಿಗಳು ಸ್ಕೂಟರ್ ನಲ್ಲಿಯೇ ಪರಾರಿಯಾಗಿದ್ದಾರೆ ಎಂದು ಆರೋಪಿಗಳು ಪೊಲೀಸರ ವಿಚಾರಣೆಯ ವೇಳೆ ಒಪ್ಪಿಕೊಂಡಿರುವುದಾಗಿ ತಿಳಿದು ಬಂದಿದೆ.
ಕೊಲೆ ಆರೋಪಿ ಮುರಳೀಕೃಷ್ಣ ಅವರ ವಿರುದ್ದ ಈ ಹಿಂದೆ ಕಾಸರಗೋಡಿನ ಬದಿಯಡ್ಕ ಠಾಣೆಯಲ್ಲಿ ಕೊಲೆಯತ್ನ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಡಿ.ವೈ.ಎಸ್.ಪಿ ವಿಜಯ ಪ್ರಸಾದ್ ಬೆಳ್ತಂಗಡಿ ವೃತ್ತನಿರೀಕ್ಷಕ ನಾಗೇಶ್ ಕದ್ರಿ ಅವರ ನೇತೃತ್ವದಲ್ಲಿ ಪೊಲೀಸರು ಹಾಗೂ ತಂಡ ತನಿಖೆ ನಡೆಸಿದ್ದರು.

LEAVE A REPLY

Please enter your comment!
Please enter your name here