ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಪುದುವೆಟ್ಟು ಗ್ರಾಮದ ನಿಡ್ವಾಳ ಗದ್ದೆಯಲ್ಲಿ ಕಂಡಡ್ ಒಂಜಿ ದಿನ ಕಾರ್ಯಕ್ರಮ ಆ.25ರಂದು ಸಂಭ್ರಮದಿಂದ ನಡೆಯಿತು.
ನೂರಾರು ಸಂಖ್ಯೆಯಲ್ಲಿ ಮಕ್ಕಳು, ಪುರುಷರು, ಮಹಿಳೆಯರು ಕೆಸರಿನೋಕುಳಿಯಲ್ಲಿ ಮಿಂದೆದ್ದು ಸಂಭ್ರಮಿಸಿದರು. ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಈ ಸಂದರ್ಭದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ .
ಬೆಳಗ್ಗೆ ಶಾಸಕ ಹರೀಶ್ ಪೂಂಜ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕಿನ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪ ವ್ಯಕ್ತ ಪಡಿಸಿ ಶುಭ ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಮಾತನಾಡುತ್ತಾ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆಸಲ್ಲಿಸಿದರು

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರು, ನಿರ್ದೇಶಕರುಗಳು ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಸಂಘದ ಸದಸ್ಯರುಗಳು ನಾಗರಿಕರು ಭಾಗಿಗಳಾದರು.
