Home ಸ್ಥಳೀಯ ಸಮಾಚಾರ ಬೆಳ್ತಂಗಡಿ ತಾಲೂಕಿನಿಂದ ವರ್ಗಾವಣೆಯಾದ ಶಿಕ್ಷರುಗಳಿಗೆ ಬೀಳ್ಕೊಡುಗೆ

ಬೆಳ್ತಂಗಡಿ ತಾಲೂಕಿನಿಂದ ವರ್ಗಾವಣೆಯಾದ ಶಿಕ್ಷರುಗಳಿಗೆ ಬೀಳ್ಕೊಡುಗೆ

234
0

ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಂಗಳೂರು ಬೆಳ್ತಂಗಡಿ ತಾಲೂಕು ಘಟಕ ಇದರ ವತಿಯಿಂದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಿಂದ ಬೇರೆ ತಾಲೂಕು ಜಿಲ್ಲೆಗಳಿಗೆ ವರ್ಗಾವಣೆಯಾದ ಶಿಕ್ಷಕರುಗಳಿಗೆ ಬೀಲ್ಕೊಡುವ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಪರಿಷತ್ ಶಾಸಕರಾದ ಶ್ರೀ ಎಸ್ ಎಲ್ ಭೋಜೇಗೌಡ ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಿ ವರ್ಗಾವಣೆ ಸರಕಾರಿ ನೌಕರರ ಹಕ್ಕು ಅದು ಕಾಲಕಾಲಕ್ಕೆ ಸರಿಯಾಗಿ ನಡೆದರೆ ಯಾವುದೇ ಸಮಸ್ಯೆ ಗೊಂದಲಗಳು ಉಂಟಾಗುವುದಿಲ್ಲ. ಈ ನಿಟ್ಟಿನಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘದವರು ಪ್ರತಿ ಶಿಕ್ಷಕರ ಸಮಸ್ಯೆಯನ್ನು ತಿಳಿದುಕೊಂಡು ಪರಿಹರಿಸಲು ಜನಪ್ರತಿನಿಧಿಗಳ ಮೂಲಕ ಪ್ರಯತ್ನಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು .ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನಾನು ಶಿಕ್ಷಕರ ಸಮಸ್ಯೆ ವಿಶೇಷವಾಗಿ ಶೈಕ್ಷಣಿಕ ವ್ಯವಸ್ಥೆಯಲ್ಲಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲ್ಲು ಸರಕಾರದೊಂದಿಗೆ ಸದಾ ಚರ್ಚಿಸಿ ನ್ಯಾಯಕೊಡಿಸಲು ಬದ್ದನಾಗಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಹೊಸದಾಗಿ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾದ ಶ್ರೀ ಎಸ್ ಎಲ್ ಭೋಜೇಗೌಡರಿಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ ವರ್ಷ ತಾಲೂಕಿನ ಪ್ರೌಢಶಾಲೆಯಿಂದ 20 ಶಿಕ್ಷಕರು ಬೇರೆ ಬೇರೆ ತಾಲೂಕುಗಳಿಗೆ ವರ್ಗಾವಣೆಯಾಗಿರುತ್ತಾರೆ.ಇದೇ ಸಂದರ್ಭದಲ್ಲಿ ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಹುದ್ದೆಗೆ ಭಡ್ತಿ ಹೊಂದಿದ ಶ್ರೀ ಯಾಕೂಬ್ ,ಶ್ರೀ ಕೊರಗಪ್ಪ ತೆಲುಗ ,ಶ್ರೀ ಗೋಪಾಲ,ಶ್ರೀ ರಾಜೇಂದ್ರ, ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿ ತಾಲೂಕಿನಿಂದ ಭಡ್ತಿಹೊಂದಿದ ಶ್ರೀ ಭುವನೇಶ್ ಜೆ ಇವರನ್ನೂ ಗೌರವಿಸಲಾಯಿತು. ಹಾಗೂ ಲಯನ್ ಶ್ರೀ ರವೀಂದ್ರ ಶೆಟ್ಟಿ ನಿವೃತ್ತ ವ್ಯವಸ್ಥಾಪಕರು ಇವರಿಗೆ ಬಹುಭಾಷಾ ವಲ್ಲಭ ಬಿರುದುನೀಡಿ ಗೌರವಿಸಲಾಯಿತು, ಮತ್ತು 2023-24ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ತಾಲೂಕಿನ ಸರಕಾರಿ ಮತ್ತು ಅನುದಾನಿತ ಶಾಲೆ ವಿದ್ಯಾಶರ್ಥಿಗಳಿಗೆ ಹಾಗೂ ರಾಜ್ಯಕ್ಕೆ 2ನೇ ಸ್ಥಾನಗಳಿಸಿದ ಚಿನ್ಮಯೀ ಇವರಿಗೆ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿ , ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಂಗಳೂರು ಇದರ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಮಹಮ್ಮದ್ ರಿಯಾಜ್, ಬಂಟ್ವಾಳ ಘಟಕದ ಅಧ್ಯಕ್ಷರಾದ ಶ್ರೀ ಜೋಯೆಲ್ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಕಿಶೋರ್ ಕುಮಾರ್,ಲಿಪಿಕ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಶಿವಶಂಕರ್ ಉಪಸ್ಥಿತರಿದ್ದರು. ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಂಗಳೂರು ಬೆಳ್ತಂಗಡಿ ತಾಲೂಕುನ ಘಟಕದ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ತಚ್ಚಮೆ ಅಧ್ಯಕ್ಷತೆವಹಿಸಿದ್ದರು.ಕಾರ್ಯದರ್ಶಿ ಶ್ರೀ ಶಿವಪುತ್ರ ಸುಣಗಾರ ಸ್ವಾಗತಿಸಿದರು.ಕೋಶಾಧಿಕಾರಿ ಶಿವಬಾಳು ವಂದಿಸಿದರು. ಸುಧಾಕರ್ ನಿರ್ವಹಿಸಿದರು.

LEAVE A REPLY

Please enter your comment!
Please enter your name here