Home ಸ್ಥಳೀಯ ಸಮಾಚಾರ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಡಿ.ಎಚ್.ಒ ಭೇಟಿ ಪರಿಶೀಲನೆ

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಡಿ.ಎಚ್.ಒ ಭೇಟಿ ಪರಿಶೀಲನೆ

0

ಬೆಳ್ತಂಗಡಿ; ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಜಿಲ್ಲಾ ಆರೋಗ್ಯಾಧಿಕಾರಿಯವರು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದರು. ತಾಲೂಕು‌ ಆಸ್ಪತ್ರೆಯ
ಕೆಲ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ, ಹಾಗೂ ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ ಬಂದ ದೂರುಗಳನ್ನು ಪರಿಶೀಲಿಸಲಾಯಿತು. ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.


ಆಸ್ಪತ್ರೆಯ ಸಿಬ್ಬಂದಿಗಳ ಸಭೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದರು.
ಶವಪರೀಕ್ಷಾ ಕೊಠಡಿಗೆ ಮತ್ತು ರೋಗಿಗಳ ವಾರ್ಡ್ ಗೆ ಬೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ತಾಲೂಕು ಆರೋಗ್ಯಾಧಿಕಾರಿಗಳು ವೈದ್ಯಾಧಿಕಾರಿಗಳು,ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮತ್ತು ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version