ಬೆಳ್ತಂಗಡಿ: ಪಡಂಗಡಿ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಪಾದಚಾರಿಗೆ ಆಲ್ಲೋ ಕಾರು ಡಿಕ್ಕಿ ಹೊಡೆದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃಯಪಟ್ಟ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಪಡಂಗಡಿ ನಿವಾಸಿ ಆನಂದ ಎಂಬವರಾಗಿದ್ದಾರೆ.
ಈ ಬಗ್ಗೆ
ಪಡಂಗಡಿಯ ಲಕ್ಷ್ಮೀ ಎಂಬವರು ದೂರು ನೀಡಿದ್ದು ಲಕ್ಷ್ಮೀ ರವರ ಪತಿಯ ಸಹೋದರ ಆನಂದ ಎಂಬವರು, ಪಡಂಗಡಿ ಗ್ರಾಮದ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ, ಅದೇ ರಸ್ತೆಯಲ್ಲಿ ಆಲ್ಲೋ ಕಾರಿನ ಚಾಲಕ ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಅನಂದ ರವರ ಹಿಂಭಾಗಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಪರಿಣಾಮ ಆನಂದ ರವರು ರಸ್ತೆಗೆ ಬಿದ್ದು ತೀವ್ರ ಸ್ವರೂಪದ ಗಾಯಗೊಂಡಿದ್ದಾರೆ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಅಂಬುಲೆನ್ಸ್ ಮುಖೇನ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಆನಂದ ರವರು ದಾರಿಮಧ್ಯೆ ಮೃತಪಟ್ಟಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
