ಬೆಳ್ತಂಗಡಿ; ಬೆಳ್ತಂಗಡಿ ಪಟ್ಟಣಪಂಚಾಯತಿನ ನೂತನ ಅಧ್ಯಕ್ಷರಾಗಿ ಜಯಾನಂದ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗೌರಿ ಅವರು ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿ ಪಟ್ಟಣ ಪಂಚಾಯತಿನಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಬುಧವಾರ ನಡೆಯಿತು ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿತ್ತು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿದ್ದು ಇವರಿಬ್ಬರನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಗಿರುವುದಾಗಿ ಚುನಾವಣಾ ಅಧಿಕಾರಿ ತಹಶೀಲ್ದಾರ್ ಅವರು ಪ್ರಕಟಿಸಿದರು.
ಚುನಾವಣೆಯಲ್ಲಿ ದ.ಕ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.