ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಮಾಡುವ ಮೂಲಕ ಆಚರಿಸಲಾಯಿತು .ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಮಾಜಿ ಮಂಡಲದ ಅಧ್ಯಕ್ಷರಾದ ಶ್ರೀ ಕುಶಾಲಪ್ಪ ಗೌಡ ಪೂವಾಜೆ ಭಾಗವಹಿಸಿ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಹಾಗೂ ಮಹಿಳಾಮರ್ಚಾದ ಪ್ರಭಾರಿಗಳಾದ ಜಯಾನಂದ ಗೌಡ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ ಮಹಿಳಾ ಮೋರ್ಚದ ಕಾರ್ಯವೈಕರಿ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮ ದಲ್ಲಿ ನಿವೃತ್ತ ಶಿಕ್ಷಕಿಯರಾದ ಉಮಾ ರಾವ್ , ರಾಜೇಶ್ವರಿ, ಸುಧಾ ಇವರನ್ನು ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಮಹಿಳಾಮೂರ್ಚದ ಪದಾಧಿಕಾರಿಗಳಾದ ಶಶಿಕಲಾ, ಚಂಚಲಾಕ್ಷಿ, ಸಂಗೀತ ಶೆಟ್ಟಿ, ಮಂಜುಳಾ, ವೀಣಾ ವಿನೋದ, ರಶ್ಮಿ ಪಟ್ಟವರ್ಧನ್, ಆಶಲತಾ ಲಾಯಿಲ, ಪುಷ್ಪ ಕರಿಮಣಿಯಲು ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿಗಳಾದ ತುಳಸಿ ಮಾಲಾಡಿ ಸ್ವಾಗತಿಸಿ ನಿರೂಪಿಸಿ ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು.