Home ಸ್ಥಳೀಯ ಸಮಾಚಾರ ನಾರಾವಿಯಲ್ಲಿ ಕೊರಗ ಕುಟುಂಬಗಳಿಗೆ ದಾಖಲೆಗಳ ನೊಂದಣಿ ಶಿಬಿರ

ನಾರಾವಿಯಲ್ಲಿ ಕೊರಗ ಕುಟುಂಬಗಳಿಗೆ ದಾಖಲೆಗಳ ನೊಂದಣಿ ಶಿಬಿರ

0

ಬೆಳ್ತಂಗಡಿ; ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮದ ಅಂಗವಾಗಿ ಕೊರಗ ಕುಟುಂಬಗಳಿಗೆ ದಾಖಲೆಗಳ ನೊಂದಣೆ ಕಾರ್ಯಕ್ರಮ ನಡೆಯಿತು.
ನೈಜ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಕಾರ್ಯಕ್ರಮದ ಮಹಾ ಅಭಿಯಾನ-2 ಕಾರ್ಯಕ್ರಮದಲ್ಲಿ ಕೊರಗ ಸಮುದಾಯಕ್ಕೆ ಅವಶ್ಯವಿರುವ ಸರ್ಕಾರಿ ದಾಖಲೆಗಳಾದ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ ಹಾಗೂ ಅಭಾಕಾರ್ಡ್* ಗಳನ್ನು ಒದಗಿಸಲು ವಿವಿಧ ಇಲಾಖೆಗಳ ಸಮ್ಮುಖದಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.ಈಈ ಸಂದರ್ಭದಲ್ಲಿ ವೈದ್ಯಕೀಯ ತಪಾಸಣೆ ನಡೆಸಿ, ಸೂಕ್ತ ದಾಖಲೆಗಳನ್ನು ಪಡೆಯಲಾಯಿತು.


ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ
ಆದಿವಾಸಿ ಕೊರಗ ಸಮುದಾಯದಲ್ಲಿ ಸರಕಾರಿ ದಾಖಲೆಗಳು ಇಲ್ಲದೇ ಇರುವುದರಿಂದ, ಸರಕಾರದ ಯೋಜನೆಗಳನ್ನು ಪಡೆಯುವಲ್ಲಿ ವಿಫಲರಾಗುತ್ತಾರೆ. ಆದುದರಿಂದ ಈ ಜನ್ ಮನ್ ಕಾರ್ಯಕ್ರಮದಲ್ಲಿ ಕೊರಗ ಸಮುದಾಯದವರು ಎಲ್ಲಾ ದಾಖಲೆಗಳನ್ನು ಪಡೆಯುವಲ್ಲಿ ಸಹಕಾರಿಯಾಗಿದೆ, ವಿವಿಧ ಇಲಾಖೆಗಳು ಈ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ, ಸುಲಭವಾಗಿ ದಾಖಲೆಗಳನ್ನು ಪಡೆಯಬಹುದಾಗಿದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತೆ ವಿನಂತಿಸಿದರು. ಕಾರ್ಯಕ್ರಮದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಮಿತ್ರಾ,


ಸುಧಾಕರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾವಿ, ಶೇಷಗಿರಿ ನಾಯಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳ್ತಂಗಡಿ, ಉಪಸ್ಥಿತರಿದ್ದರು. ನಾರಾವಿ ಗ್ರಾಮದ ಕೊರಗ ಸಮುದಾಯದವರು ಉಪಸ್ಥಿತರಿದ್ದು ಶಿಬಿರದ ಪ್ರಯೋಜನ ಪಡೆದುಕೊಂಡರು.
ಗಿರಿಜನ ಕಲ್ಯಾಣ ವಿಸ್ತರಣಾಧಿಕಾರಿ ಹೇಮಲತಾ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version