Home ಸ್ಥಳೀಯ ಸಮಾಚಾರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ಯುವತಿ ಮೃತ್ಯು

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ಯುವತಿ ಮೃತ್ಯು

812
0

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ದೇವಗಿರಿಯ ಪೈಕಾಟ್ ನಿವಾಸಿ ಜೋಸ್ ಎಂಬವರ ಪುತ್ರಿ ಟಿನು(27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕನೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು. ಒಂದು ವಾರದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಸೈಂಟ್ ಜೋನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತದೇಹರ ಅಂತ್ಯ ಸಾಮಸ್ಕಾರ ಪತಿಯ ಊರಾದ ಸಾಗರದಲ್ಲಿ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ. ಅವರು ತಂದೆ-ತಾಯಿ, ಪತಿ, ಸಹೋದರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here