
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್ ರವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಬಗ್ಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ಅವರು ಶೀಘ್ರದಲ್ಲಿ ಕಾನೂನು ಸಚಿವರು ಮತ್ತು ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಕೋಶಾಧಿಕಾರಿ ಪ್ರಶಾಂತ್ ಎಮ್, ಜತೆ ಕಾರ್ಯದರ್ಶಿ ವಿನಯ ಕುಮಾರ್, ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಉಪಸ್ಥಿತರಿದ್ದರು.
