
ಬೆಳ್ತಂಗಡಿ; ಬದ್ಯಾರು ಸಮೀಪ ವಿಧ್ವತ್ ಕಾಲೇಜಿನ ಎದುರು ಸ್ಕೂಟರ್ ಗೆ ಅಪರಿಚಿತ ವಾಹನ ಡಿಕ್ಕಿಹೊಡೆದು ಪರಾರಿಯಾದ ಘಟನೆ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡಿರುವ ಸ್ಕೂಟರ್ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳು ಪಡಂಗಡಿ ನಿವಾಸಿ ಸುಜಿತ್ ಶೆಟ್ಟಿ (22) ಎಂಬವರಾ ಗಿದ್ದಾರೆ.ಎಂದು ತಿಳಿದು ಬಂದಿದೆ. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುವ ಯುವಕ ಬೆಳಗ್ಗೆ 4.30ರ ಸಮಾರಿಗೆ ಮನೆಯಿಂದ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸುಜಿತ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ ಆದರೆ ಅಪಘಾತ ನಡೆಸಿದ ವಾಹನ ನಿಲ್ಲಿಸದೆ ಪರಾರಿಯಾಗಿದೆ.
ಆಂಬ್ಯೂಲೆನ್ಸ್ ಚಾಲಕ ಜಲೀಲ್ ಅವರ ಸಹಕಾರದೊಂದಿಗೆ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತ ನಡೆಸಿದ ಅಪರಿಚಿತ ವಾಹನದ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.