Home ಅಪರಾಧ ಲೋಕ ಕುತ್ಲೂರಿನಲ್ಲಿ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ತಡೆದು ಹಲ್ಲೆ ಪ್ರಕರಣ ದಾಖಲು

ಕುತ್ಲೂರಿನಲ್ಲಿ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ತಡೆದು ಹಲ್ಲೆ ಪ್ರಕರಣ ದಾಖಲು

0

ಬೆಳ್ತಂಗಡಿ; ತಾಲೂಕಿನ ಕುತ್ಲೂರು ಗ್ರಾಮದಲ್ಲಿ ಕಾಲೇಜಿಗೆ ಹೋಗಿ ಹಿಂತಿರುಗುತ್ತಿದ್ದ ವಿದ್ಯಾರ್ಥಿ ನಿಯನ್ನು ರಸ್ತೆಯ ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆ‌ನಡೆಸಿ ಬಟ್ಟೆ ಹರಿದು ಮಾನಹಾನಿ ಮಾಡಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸ್ಥಳೀಯ ನಿವಾಸಿ ಶಂಕರ ದೇವಾಡಿಗ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ.
ಆದೋಪಿ ವಿದ್ಯಾರ್ಥಿನಿಯೊಂದಿಗೆಕಳೆದ ಕೆಲದಿನಗಳಿಂದ ಅನ್ಯೋನ್ಯವಾಗಿದ್ದರು, ಈ ವಿಚಾರ ಆಕೆಯ ತಾಯಿಗೆ ತಿಳಿದು‌ ಆತನೊಂದಿಗೆ ಮಾತನಾಡದಂತೆ ಮಗಳಿಗೆ ಎಚ್ಚರಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿ ಆತ‌ ನಂಬರ್ ಅನ್ನು ಬ್ಲಾಕ್ ಮಾಡಿದ್ದಳು ಎನ್ನಲಾಗಿದೆ. ಇದೇ ಕಾರಣಕ್ಕೆ ಸೆ. 12 ರಂದು ಸಂಜೆ ಕಾಲೇಜು ಮುಗಿಸಿ ವಿಧ್ಯಾರ್ಥಿನಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ನಿರ್ಜನ ಪ್ರದೇಶದಲ್ಲಿ ಕಾದು ನಿಂತಿದ್ದ ಆರೋಪಿ ಆಕೆಯಮೇಲೆ ದಾಳಿ ನಡೆಸಿದ್ದಾನೆ ಮೊಬೈಲ್ ಅನ್ನು ಕಸಿದುಕೊಂಡು ಅವಾಚ್ಯವಾಗಿ ನಿಂದಿಸಿ ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಲ್ಲದೆ ಬಟ್ಟೆಯನ್ನು ಹರಿದು ಮಾನಕ್ಕೆ ಕುಂದುಂಟು ಮಾಡಿದ್ದಾನೆ ಅಲ್ಲದೆ ನಾಳೆ ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾಳೆ ಅದರಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version