Home ಕ್ರೀಡಾ ಸಮಾಚಾರ ರಾಜ್ಯಮಟ್ಟದ ಕ್ರೀಡಾಕೂಟ ಲಾಯಿಲದ ಚಂದ್ರಿಕಾ ಗೆ 400ಮೀ ಹಡಲ್ಸ್ ನಲ್ಲಿ ಬೆಳ್ಳಿ ಪದಕ

ರಾಜ್ಯಮಟ್ಟದ ಕ್ರೀಡಾಕೂಟ ಲಾಯಿಲದ ಚಂದ್ರಿಕಾ ಗೆ 400ಮೀ ಹಡಲ್ಸ್ ನಲ್ಲಿ ಬೆಳ್ಳಿ ಪದಕ

56
0


ಬೆಳ್ತಂಗಡಿ; ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ನಲ್ಲಿ ಉಜಿರೆ ಎಸ್.ಡಿಎಂ ಕಾಲೇಜ್ ನ ವಿಧ್ಯಾರ್ಥಿನಿ ಚಂದ್ರಿಕಾ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಮೋಹನ್ ಪೂಜಾರಿ ಮತ್ತು ಯಶೋಧ ದಂಪತಿಗಳ ಪ್ರಥಮ ಪುತ್ರಿ ಚಂದ್ರಿಕಾ ಇವರು ಪ್ರಾಥಮಿಕ ಶಾಲಾ ಹಂತದಲ್ಲಿಯೇ ಹಲವಾರು ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರು 2022-23 ಸಾಲಿನ ಕೇರಳ ಕೊಚ್ಚಿಯಲ್ಲಿ ನಡೆದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿ ಸೌತ್ ಇಂಡಿಯನ್ ಕ್ರೀಡಾಕೂಟದಲ್ಲಿ ಗಮನ ಸೆಳೆದಿದ್ದಾರೆ. 2022-23 ರಲ್ಲಿ ಬೆಂಗಳೂರಿನಲ್ಲಿ ನಡೆದ ಅಮೆಚೂರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.

ಅದೇ ವರ್ಷ ಉಡುಪಿಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ ಹಾಗೂ 400 ಮೀಟರ್ ನಲ್ಲಿ ದ್ವಿತೀಯ ಸ್ಥಾನ , ಜೊತೆಗೆ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕಗಳನ್ನು ಗಳಿಸಿದ್ದಾರೆ. 2023-24 ರಲ್ಲಿ ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಅಮೆಚೂರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಅದೇ ವರ್ಷ ಮಂಗಳೂರಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದೀಗ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ 400 ಮೀಟರ್ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ ಪಡೆಸಿದ್ದಾಳೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯೊಬ್ಬಳ ಕ್ರೀಡಾ ಸಾಧನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ‌.

LEAVE A REPLY

Please enter your comment!
Please enter your name here