ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದ ಸಮೀಪ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನದಿ ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಸೆ18 ರಂದು ಪತ್ತೆಯಾಗಿದೆ.
ನದಿ ನೀರಿನಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡುದ್ದಾರೆ
ಸುಮಾರು 45ರಿಂದ50 ವರ್ಷ ಪ್ರಯದ ವ್ಯಕ್ತಿಯ ಮೃತದೇಹ ಇದಾಗಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಂತೆ ಕಂಡು ಬರುತ್ತಿದ್ದು ಮೃತನ ಯಾವುದೇ ಗುರುತುಗಳು ಪತ್ತೆಯಾಗಿಲ್ಲ ವಾರಿಸುದಾರರು ಇದ್ದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.