ಬೆಳ್ತಂಗಡಿ; ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಕ್ಕೆ ತರುವ ವಿಚಾರದ ಬಗ್ಗೆ ಬೆಂಗಳೂರಿನ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶ ಗಳ ಶಾಸಕರುಗಳು ಭಾಗವಹಿಸಿದ್ದರು.
ಸಮಾಲೋಚನಾ ಸಭೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭಾಗವಹಿಸಿ,ಈ ವರದಿಯ ಅನುಷ್ಟಾನದಿಂದಾಗಿ ಬೆಳ್ತಂಗಡಿ ತಾಲೂಕಿನ ಅನೇಕ ಗ್ರಾಮಗಳ ರೈತರು ಹಾಗು ನಿವಾಸಿಗಳಿಗೆ ತೊಂದರೆಯುಂಟಾಗುವುದರಿಂದ ಈ ವರದಿಯನ್ನು ಅನುಷ್ಠಾನಗೊಳಿಸಬಾರದೆಂದು ಅಭಿಪ್ರಾಯವನ್ನು ತಿಳಿಸಿದರು.