Home ಅಪರಾಧ ಲೋಕ ಕಾಶೀಪಟ್ಣ ಪತಿ ಪತ್ನಿ ನೇಣು ಬಿಗಿದು ಅತ್ಮಹತ್ಯೆ

ಕಾಶೀಪಟ್ಣ ಪತಿ ಪತ್ನಿ ನೇಣು ಬಿಗಿದು ಅತ್ಮಹತ್ಯೆ

90
0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆ ಎಂಬಲ್ಲಿ ಪತಿ ಹಾಗೂ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಸ್ಥಳೀಯ ನಿವಾಸಿಗಳಾದ ನೊಣಯ್ಯ ಪೂಜಾರಿ63) ಹಾಗೂ ಬೇಬಿ (46) ಎಂಬವರೆ ಆತ್ಮಹತ್ಯೆ ಮಾಡಿಕೊಂಡ ದಂಪತಿಗಳಾಗಿದ್ದಾರೆ. ತಮ್ಮ ಮನೆಯ ಸಮೀಪ ಕಾಡಿನಲ್ಲಿ ಗುರುವಾರ ಇವರಿಬ್ಬರೂ ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನೊಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಲ್ಲಿದ್ದರು. ಇದೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ.

ನೋಣಯ್ಯ ಪೂಜಾರಿಗೆ ಇದು ಎರಡನೇ ಮದುವೆಯಾಗಿದೆ. ಅವರ ಮೊದಲ ಪತ್ನಿ ಹತ್ತುವರ್ಷದ ಹಿಂದೆ ಸಾವನ್ನಪ್ಪಿದ್ದರು ಬಳಿಕ ಕೆಲವು ವರ್ಷಗಳ ಹಿಂದೆ ಇವರು ಬೇಬಿಯನ್ನು ವಿವಾಹವಾಗಿದ್ದರು.ಮೊದಲನೆ ಪತ್ನಿಗೆ ಐದು ಗಂಡು,ಒಂದು ಮಕ್ಕಳಿದ್ದರು.ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here