ಮುಂಡಾಜೆ :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ 17 ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪ್ರೌಢಶಾಲಾ ಬಾಲಕಿಯರ ತಂಡ ಸತತ 14 ವರುಷಗಳಿಂದ ಪ್ರಥಮ ಸ್ಥಾನ ಪಡೆದು ಅಕ್ಟೋಬರ್ 8,9 ರಂದು ಹಾಸನದಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. ಬೆಸ್ಟ್ ಪಾಸರ್ ಆಗಿ ಕು.ಸಿಂಚನಾ ಬಂದಾರು.
ಬೆಸ್ಟ್ ಹೊಡೆತಗಾರ್ತಿಯಾಗಿ ಕು.ಯಕ್ಷಿತಾ ಬಂದಾರು ಇವರು ವೈಯಕ್ತಿಕ ಪ್ರಶಸ್ತಿ ಪಡೆದಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಹಾಗೂ ದೈಹಿಕ ಶಿಕ್ಷಕರಿಗೆ, ಸಹಕರಿಸಿದವರಿಗೆ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.