Home ಕ್ರೀಡಾ ಸಮಾಚಾರ ಬಂದಾರು ಪ್ರಾಥಮಿಕ ಶಾಲೆಯ ಬಾಲಕಿಯರ ವಾಲಿಬಾಲ್ ತಂಡಕ್ಕೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

ಬಂದಾರು ಪ್ರಾಥಮಿಕ ಶಾಲೆಯ ಬಾಲಕಿಯರ ವಾಲಿಬಾಲ್ ತಂಡಕ್ಕೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

0

ಬಂದಾರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲಮಾಧ್ಯಮ ಶಾಲಾ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ 14 ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಹಾಸನದಲ್ಲಿ ನಡೆಯುವ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಉತ್ತಮ ಪಾಸರ್ ಆಗಿ ಕು. ಅತಿಶ್ರೀ ಬಂದಾರು, ಉತ್ತಮ ಹೊಡೆತಗಾರ್ತಿಯಾಗಿ ಕು.ಯಶ್ಮಿತಾ ಬಂದಾರು ವೈಯಕ್ತಿಕ ಬಹುಮಾನ ಪಡೆದಿರುತ್ತಾರೆ.


ವಿಜೇತ ಬಂದಾರು ತಂಡದ ಎಲ್ಲಾ ಕ್ರೀಡಾಪಟುಗಳಿಗೆ ಹಾಗೂ ದೈಹಿಕ ಶಿಕ್ಷಕರಿಗೆ, ಸಹರಿಸಿದವರಿಗೆ, ಶಾಲಾಭಿವೃದ್ಧಿ ಸಮಿತಿ,ಹಳೆ ವಿದ್ಯಾರ್ಥಿ ಸಂಘ,ಶಾಲಾ ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version