

ಬೆಳ್ತಂಗಡಿ; ಮಡಂತ್ಯಾರು ಪೇಟೆಯಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಇಸ್ಪೀಟು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 23ಮಂದಿ ಆರೋಪಿಗಳನ್ನು ಬಂಧಿಸಿ ನಗದು ಹಣ ಹಾಗೂ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಡಂತ್ಯಾರು ಪೇಟೆಯ ಬಳಿಯಿರುವ ಕಟ್ಟಡದ ಹಿಂಭಾಗದಲ್ಲಿರುವ ಶೆಡ್ ನಲ್ಲಿ ಕಾನೂನು ಬಾಹಿರವಾಗಿ ಇಸ್ಪೀಟ್ ಅಡ್ಡೆಯನ್ನು ನಡೆಸಲಾಗುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಪಿಎಸ್.ಐ ನಂದಕುಮಾರ್ ಹಾಗೂ ತಂಡ ದಾಳಿ ನಡೆಸಿದ್ದು ಈ ಸಂದರ್ಭದಲ್ಲಿ ಅಂದರ್ ಬಾಹರ್ ಆಟದಲ್ಲಿ ನಿರತರಾಗಿದ್ದ 23 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಿಂದ ಸುಮಾರು 36,729 ಮೌಲ್ಯದ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
