ಬೆಳ್ತಂಗಡಿ: ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯ ಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂದಿತ ಆರೋಪಿ ಕೇರಳ ಕಾಸರಗೋಡು ಜಿಲ್ಲೆಯ ನಿವಾಸಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬಾತನಾಗಿದ್ದಾನೆ
2014 ರಲ್ಲಿ ಬೆಳ್ತಂಗಡಿ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಪ್ರಕರಣದ ಆರೋಪಿಯಾಗಿರುವ ಈತ ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ
ಈತ ಉಜಿರೆಯಲ್ಲಿ ಇರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.