Home ಅಪರಾಧ ಲೋಕ ಗುರುವಾಯನಕೆರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು

ಗುರುವಾಯನಕೆರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು

0

ಬೆಳ್ತಂಗಡಿ: ಗುರುವಾಯನಕೆರೆ ಪೇಟೆಯಲ್ಲಿ ಅಂಗಡಿಯ ಸಮೀಪ ನಿಲ್ಲಿಸಿ ಹೋಗಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.
ವೇಣೂರು ಕರಿಮಣೇಲು ನಿವಾಸಿ ಸಂತೋಷ್ ಕುಮಾರ್ ಎಂಬವರು ಸೆ.20ರಂದು ತಮ್ಮ ಬೈಕ್ ಅನ್ನು ಗುರುವಾಯನ ಕೆರೆ ಪೇಟೆಯಲ್ಲಿ ನಿಲ್ಲಿಸಿ ಹೋಗಿದ್ದರು ಸಂಜೆ ಹಿಂತಿರುಗಿ ಬಂದು ನೋಡಿದಾಗ ಬೈಕ್‌ ಕಳ್ಳತನವಾಗಿತ್ತು. ಕಳ್ಳತನವಾದ ಬೈಕಿನ ಮೌಲ್ಯ ಸುಮಾರು 68 ಸಾವಿರ ಎಂದು ಅಂದಾಜಿಸಲಾಗಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ‌ ಪ್ರಕರಣ ದಾಖಲಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version