ಬೆಳ್ತಂಗಡಿ; ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘದ ರಾಜ್ಯ ಸಮಿತಿಸಭೆಯಲ್ಲಿ ಸರಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧರಿಸಲಾಗಿದ್ದು ಅದರಂತೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಬೆಳ್ತಂಗಡಿ ತಹಶೀಲ್ದಾರ್ ಅವರ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸೋಮವಾರ ಸರಕಾರಕ್ಕೆ ಮನವಿ ಸಲ್ಲಿಸಿದರು.
ಮೊಬೈಲ್ ಆಪ್ ಮೂಲಕ ಕೆಲಸಮಾಡಲು ಸೂಕ್ತ ವ್ಯವಸ್ಥೆಗಳನ್ನು ಕಲ್ಪಸದ ಕಾರಣ ಹಲವು ಸಮಸ್ಯೆಗಳಾಗುತ್ತಿರುವ ಬಗ್ಗೆ ಕಚೇರಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ, ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರಕಾರದ ಮುಂದೆ ಸಮಿತಿ ಇಟ್ಟಿದ್ದು ಈ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.