

ಬೆಳ್ತಂಗಡಿ; ನಗರದ ಹಳೆಕೋಟೆ ಎಂಬಲ್ಲಿ ಮನೆಯಿಂದ ಸುಮಾರು ಐದು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಐದು ಲಕ್ಷ ನಗದನ್ನು ಕಳ್ಳರು ಅಲಹರಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇಲ್ಲಿನ ನಿವಾಸಿ ಪ್ರಸನ್ನ ಕುಮಾರ್ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಇದೇವರ್ಷ ಫೆಬ್ರವರಿ 13ರಿಂದ ಸೆಪ್ಟೆಂಬರ್ 24ರ ಅವಧಿಯಲ್ಲಿ ಮನೆಯ ಹಾಲ್ ನಲ್ಲಿ ಟಿ.ವಿ ಸ್ಟ್ಯಾಂಡ್ ಮೇಲೆ ಇಟ್ಟಿದ್ದ 5,05,000 ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಐದು ಲಕ್ಷ ನಗದನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರು ನೀಡಲಾಗಿದ್ದು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.