Home ಸ್ಥಳೀಯ ಸಮಾಚಾರ ಕುತ್ಲೂರಿಗೆ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಪ್ರಶಸ್ತಿ ಪ್ರಧಾನ

ಕುತ್ಲೂರಿಗೆ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಪ್ರಶಸ್ತಿ ಪ್ರಧಾನ

0

ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ -2024ರ ಸಾಹಸಮಯ ಪ್ರವಾಸಿ ತಾಣ (ಅನ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ತೂರು ಗ್ರಾಮಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಸೆ.27ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಉಪರಾಷ್ಟ್ರಪತಿ ಜಗದೀಪ್ ಧನ್ಮ‌ರ್ ಭಾಗವಹಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಪ್ರಶಸ್ತಿ ಪ್ರದಾನ ಮಾಡಿದರು. ಡಾಕ್ಯುಮೆಂಟರಿ ತಯಾರಿಸಿದ
ಕುತ್ಲೂರಿನ ಹರೀಶ್ ಪೂಜಾರಿ, ಹಾಗೂ ಶಶಿರಾಜ್ ಪ್ರಶಸ್ತ ಸ್ವೀಕರಿಸಿದರು, ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಶ್ರೀನಿವಾಸ್ ಇದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version