ಬೆಳ್ತಂಗಡಿ: ನಾರಾವಿ ಸಮೀಪ ಹೊಸ್ಮಾರ್ ನಲ್ಲಿ ಬೈಕ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸೋಮವಾರ ಸಂಭವಿಸಿದೆ.
ಹೊಸ್ಮಾರು ಗ್ರಾಮದ ಪಾಜಿ ಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್‌ನಡುವೆ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಪತಿ ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತರು ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದನಿವಾಸಿಗಳಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.