ಬೆಳ್ತಂಗಡಿ; ತಾಲೂಕಿನಲ್ಲಿ ಸೋಮವಾರ ಸಂಜೆಯ ವೇಳೆ ಭಾರೀ ಮಳೆ ಸುರಿದಿದೆ.
ತಾಲೂಕಿನ ತೋಟತ್ತಾಡಿ ಗ್ರಾಮದ ಸರಕಾರಿ ಶಾಲೆಯ ಕಾಂಪೌಂಡ್ ಭಾರೀ ಮಳೆಗೆ ಕುಸಿದು ಬಿದ್ದಿದೆ, ಅದೇ ರೀತಿ ಉರುವಾಲು ಗ್ರಾಮದ ತಾರಿದಡಿ ಎಂಬಲ್ಲಿ ಮನೆಗೆ ಸಿಡಿಲು ಬಡಿದು ಮನೆಗೆ ಹಾನಿ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದವೇಳೆ ಸಿಡಿಲು ಬಡಿದಿದ್ದು ಮನೆಯವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಮನೆಯ ವಿದ್ಯುತ್ ಉಪಕರಣಗಳಿಗೆ ಹಾಗೂ ಮನೆಯ ವಯರಿಂಗ್ ಗೆ ಹಾನಿ ಸಂಭವಿಸಿದೆ.