


ಬೆಳ್ತಂಗಡಿ; ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ (81 K G ವಿಭಾಗದ) ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳುವ ಉಜಿರೆ ಎಸ್ ಡಿ ಎಮ್ ಪ್ರಥಮ ವರ್ಷದ ವಿದ್ಯಾರ್ಥಿನಿ ಬಂದಾರು ಗ್ರಾಮದ ಕೆ ತೇಜಸ್ವಿನಿ ಪೂಜಾರಿ ಯವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಇಂದು ಆರ್ಥಿಕ ನೆರವನ್ನು ನೀಡಿ ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜಯವೀಕ್ರಮ್ ಕಲ್ಲಾಪು,ಉಪಾಧ್ಯಕ್ಷರಾದ ಸುಂದರ ಪೂಜಾರಿ ,ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್,ಕೋಶಾದಿಕಾರಿ ಪ್ರಶಾಂತ್ ಮಚ್ಚಿನ ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು,ವಿದ್ಯಾರ್ಥಿನಿ ತಂದೆ ಕೆ ಚಿದಾನಂದ ಪೂಜಾರಿ ಉಪಸ್ಥಿತರಿದ್ದರು.
