Home ಅಪರಾಧ ಲೋಕ ತಾತ್ಕಾಲಿಕ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಲೆಬೆಟ್ಟು ನಿವಾಸಿಗೆ19ಲಕ್ಷ ವಂಚನೆ ಪ್ರಕರಣ ದಾಖಲು

ತಾತ್ಕಾಲಿಕ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಲೆಬೆಟ್ಟು ನಿವಾಸಿಗೆ19ಲಕ್ಷ ವಂಚನೆ ಪ್ರಕರಣ ದಾಖಲು

55
0

ಬೆಳ್ತಂಗಡಿ : ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಸುಮಾರು ರೂ.19.90 ಲಕ್ಷ ವಂಚಿಸಿದ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೆ.29 ರಂದು ಮಲೆಬೆಟ್ಟು ನಿವಾಸಿ ಅಮೃತೇಶ್ ಕುಮಾರ್ ಎಂಬವರಿಗೆ. ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ಅವರ ಬಾಬು ಮೊಬೈಲ್ ನಲ್ಲಿದ್ದ ಟೆಲಿಗ್ರಾಂ ಅಪ್ಲಿಕೇಶನ್ ಗೆ ಯಾರೋ ಅಪಚಿರಿತರು https://ecommerecboostbranding.Com ವೆಬ್ ಸೈಟ್ ನ ಲಿಂಕ್ ನ್ನು ಕಳುಹಿಸಿ ನೊಂದಾಯಿಸಿಕೊಂಡು ಆನ್ ಲೈನ್ ವಸ್ತುಗಳನ್ನು ಉತ್ತೇಜಿಸಿದಲ್ಲಿ ಸಂಬಳದ ರೂಪದಲ್ಲಿ ಖಾತೆಗೆ ಹಣ ಜಮಾ ಮಾಡಲಾಗುವುದೆಂದು ತಿಳಿಸಿದ್ದರು, ಅವರು ವಂಚಕರ ಮಾರ್ಗದರ್ಶನದಂತೆ ಸದ್ರಿ ಲಿಂಕ್ ನ್ನು ಓಪನ್ ಮಾಡಿ ನೊಂದಾಯಿಸಿ ಕೊಂಡು ಅವರು ನೀಡಿರುವ ಟಾಸ್ಕನ್ನು ಮುಂದುವರಿಸುತ್ತಾ ಹೋದಂತೆ, ಟಾಸ್ಕನ್ನು ಮುಕ್ತಾಯಗೊಳಿಸಲು ಠೇವಣಿ ರೂಪದಲ್ಲಿ ಹಣ ಸಂದಾಯ ಮಾಡಬೇಕಾಗಿ ಮತ್ತು ವಿಶೇಷ ಬೋನಸ್ ನೀಡುವುದಾಗಿಯೂ ದೊರೆಯುವ ಬೋನಸ್ ಪಡೆಯಲು ಠೇವಣಿ ಹಣವನ್ನು ಮತ್ತೆ ಮತ್ತೆ ಪಾವತಿಸಲು ತಿಳಿಸಿದಂತೆ ಅವರು ವಿವಿಧ ಬ್ಯಾಂಕ್ ಖಾತೆಯಿಂದ ಅಪರಿಚಿತ ವ್ಯಕ್ತಿಯ ವಿವಿಧ ಬ್ಯಾಂಕ್ ಖಾತೆಗೆ ಒಟ್ಟು 19,90,442/- ರೂ ಹಣವನ್ನು ಹಂತ-ಹಂತವಾಗಿ ವರ್ಗಾಯಿಸಿದ್ದಾರೆ ಇದಾದ ಬಳಿಕ ಈ ಅಪರಿಚಿತ ವ್ಯಕ್ತಿಗಳು ಸಂಪರ್ಕಕ್ಕೆ ಸಿಗದೆ ಜಮಾ ಮಾಡಿದ ಹಣವನ್ನು ವಾಪಾಸ್ಸು ನೀಡದೇ ನಂಬಿಸಿ ಮೋಸ ಮಾಡಿ ವಂಚಿಸಿದ್ದು ಅಪರಿಚಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಅಪರಿಚಿತರ ವಿರುದ್ಧ ಬೆಳ್ತಂಗಡಿ ಪೊಲೀಸ ಠಾಣೆಯಲ್ಲಿ ಅಕ್ರ ನಂ : 85/2024 ಕಲಂ 3110118 318(4) BNS-2023 & 66(D) IT ACT 2008 ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here