World Mental Health Day celebrations: Marathon run in Ujire

ಉಜಿರೆ : ದೈಹಿಕ ಆರೋಗ್ಯದೊಂದಿಗೆ ಮಾನಸಿಕಆರೋಗ್ಯ ರಕ್ಷಣೆಗೂ ಎಲ್ಲರೂ ಆದ್ಯತೆ ನೀಡಬೇಕು ಎಂದು ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯ ನೇತ್ರವೈದ್ಯ ಮತ್ತು ವೈದ್ಯಕೀಯ ನಿರ್ವಹಣಾಧಿಕಾರಿ ಡಾ. ರಮೇಶ್ ಹೇಳಿದರು.
ಅವರು ಗುರುವಾರ ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಮ್ಯಾರಥಾನ್ ಓಟವನ್ನು ಉದ್ಘಾಟಿಸಿ ಮಾನಸಿಕ ಆರೋಗ್ಯದ ಮಹತ್ವವನ್ನು ವಿವರಿಸಿದರು.
ಎಸ್.ಡಿ.ಎಮ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದರು.160ಕ್ಕೂ ಹೆಚ್ಚು ಮಂದಿ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದರು. ಐದು ಕಿಲೋಮೀಟರ್ ಪೂರೈಸಿದ ಮೊದಲ ಐದು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಮನೋವಿಜ್ಞಾನ ಸ್ನಾತಕೋತರ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳು ನಾಟಕ ಪ್ರದರ್ಶನದ ಮೂಲಕ ಮಾನಸಿಕ ಆರೋಗ್ಯ ರಕ್ಷಣೆ ಮತ್ತು ಮದ್ಯವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ಪೂರಣ್‌ವರ್ಮ, ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ವಂದನಾ ಜೈನ್, ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಹೆಚ್ ಕಾರ್ಯಕ್ರಮ ಸಂಯೋಜಕಿ ಅಶ್ವಿನಿ ಎಚ್., ಡಾ. ಮಹೇಶ್‌ಬಾಬು, ಅಶ್ವಿನಿ ಶೆಟ್ಟಿ. ಸಿಂಧು, ವಿ.ರಮ್ಯಾ ಕೆ ಮತ್ತು ಡಾ. ಸುಧೀರ್ ಕೆ.ವಿ. ಉಪಸ್ಥಿತರಿದ್ದು ಸಹಕರಿಸಿದರು.
