ಬೆಳ್ತಂಗಡಿ; ಮುಂಡಾಜೆಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ರಸ್ತೆ ಹಾಗೂ ಮನೆಯ ಮೇಲೆ ಬಿದ್ದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ರಸ್ತೆಯಲ್ಲಿ ವಾಹನ ಹಾಗೂ ಜನರ ಸಂಚಾರ ಕ್ಕೆ ಅವಕಾಶವಿಲ್ಲದ ರೀತಿಯಲ್ಲಿ ಮುಚ್ವಿಹೀಗಿದೆ.
ಮುಂಡಾಜೆ ಗ್ರಾಮದ ಪಿಲತ್ತಡ್ಕ ಎಂಬಲ್ಲಿ ವನದುರ್ಗಾ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಶ್ರೀಧರ ಪೂಜಾರಿ ಎಂಬವರ ಮನೆಯ ಸಮೀಪ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿದಿದೆ. ರಸ್ತೆಗೆ ಹಾಗೂ ಮನೆಯ ಹಿಂಭಾಗದಲ್ಲಿ ಮಣ್ಣು ಬಿದ್ದಿದೆ.
ರಸ್ತೆ ಸಂಪೂರ್ಣ ಮುಚ್ಚಿ ಹೋಗಿದ್ದು ಜನರ ಹಾಗೂ ವಾಹನಗಳ ಸಂಚಾರ ಅಸಾಧ್ಯವಾಗಿದೆ. ಮನೆಯ ಹಿಂಭಾಗದಲ್ಲಿಯೂ ಮಣ್ಣು ಬಿದ್ದಿದ್ದು ಅಪಾಯಕಾರಿ ಸ್ಥಿತಿಯಿದೆ ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವು ಗೊಳಿಸುವ ನಿಟ್ಟಿನಲ್ಲಿ ಯಾರೂ ಮುಂದಾಗದ ಹಿನ್ನಲೆಯಲ್ಲಿ ಇದೀಗ ಸ್ಥಳೀಯ ಯುವಕರು ತಾವೇ ಮುಂದನಿಂತು ಮಣ್ಣನ್ನು ತೆರವು ಗೊಳಿಸುವ ಕಾರ್ಯವನ್ನು ಆರಂಭಿಸಿದ್ದಾರೆ.