
ಬೆಳ್ತಂಗಡಿ; ಪ್ರಕರಣವೊಂದರಲ್ಲಿ ಆರೋಪಿಯಾಗಿ ಕಳೆದ 20ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಪುತ್ತೂರು ನಿವಾಸಿ ಅಬ್ದುಲ್ ರಹಿಮಾನ್ (50) ಎಂಬಾತನಾಗಿದ್ದಾನೆ. 1998 ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ
ಆರುತಿಂಗಳು ಶಿಕ್ಷೆಗೆ ಒಳಪಟ್ಟ ಈತ ಬಳಿಕ ತಲೆ ಮರೆಸಿಕೊಂಡಿದ್ದ ಈತನನ್ನು ಪುತ್ತೂರು ಪೊಲೀಸರ ಸಹಕಾರದೊಂದಿಗೆ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಸ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
